ನಮ್ಮ ಆರೋಗ್ಯ ಕೇಂದ್ರ

ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಸುಸ್ಥಿರ ಬದುಕು ನಡೆಸಲು ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತವೆ. ಈ ನಿಟ್ಟಿನಲ್ಲಿ ಮಹಿಳೆಯರ ಆರೋಗ್ಯ ಅತಿ ಮುಖ್ಯ. 

ಮಹಿಳೆಯೊಬ್ಬಳು ಆರೋಗ್ಯವಾಗಿದ್ದರೆ ಕುಟುಂಬ ಸದೃಢವಾಗಿರುತ್ತದೆ, ಅದೇ ರೀತಿ ಮಹಿಳೆಯರೆಲ್ಲರೂ ಆರೋಗ್ಯವಾಗಿದ್ದರೆ ಇಡೀ ಸಮಾಜವೇ ಸದೃಢವಾಗಿರುತ್ತದೆ ಎಂಬ ಸಾರ್ವಕಾಲಿಕ ಸತ್ಯದೊಂದಿಗೆ ಮಹಿಳೆಯರಿಗಾಗಿಯೇ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ತಿಪಟೂರು ತಾಲ್ಲೂಕಿನ ಹಾಲ್ಕುರಿಕೆ ಮತ್ತು ಕೆ.ಬಿ ಕ್ರಾಸ್ ವ್ಯಾಪ್ತಿಯ ಗ್ರಾಮೀಣ ಮಹಿಳೆಯರ ಆರೋಗ್ಯ ಸೇವೆಗೆ “ನಮ್ಮ ಆರೋಗ್ಯ ಕೇಂದ್ರಗಳು” ಪ್ರಾರಂಭವಾಗಿವೆ. 

ಎಲ್ಲಾ ವಯೋಮಾನದ ಮಹಿಳೆಯರು ತಮ್ಮ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಈ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸಮಾಲೋಚಿಸಿ ಸೂಕ್ತ ಸಲಹೆ ಮತ್ತು ಪರಿಹಾರವನ್ನು ಪಡೆಯಬಹುದಾಗಿದೆ.

Read More

ಸ್ಕಿಲ್ ಟ್ರೈನಿಂಗ್ ಸೆಂಟರ್

ಶಿಕ್ಷಣದಿಂದ ಮಾತ್ರ ಉದ್ಯೋಗ ಸಿಗುವುದಿಲ್ಲ ಸ್ಪರ್ಧಾತ್ಮಕ ಯುಗದಲ್ಲಿ ಆರ್ಥಕವಾಗಿ ಸದೃಢರಾಗಲು ಹೆಚ್ಚಿನ ಕೌಶಲ್ಯ ಅಗತ್ಯವಿದ್ದು, ವಿವಿಧ ವಿಭಾಗಗಳಲ್ಲಿ ಪ್ರೋತ್ಸಾಹ ಮತ್ತು ತರಬೇತಿ ನೀಡಿ ತಿಪಟೂರು ತಾಲ್ಲೂಕು ನುರಿತ ಯುವ ಜನತೆಯ ಕೇಂದ್ರವಾಗಿ ಹೊರಹೊಮ್ಮಬೇಕು ಎಂಬ ವಾಕ್ಯಕ್ಕೆ ಕಂಕಣಬದ್ಧರಾಗಿರುವ ಶ್ರೀ ಸಿ.ಬಿ ಶಶಿಧರ್ ಅವರು ಯುವ ಜನತೆಯ ಉದ್ಯೋಗ ಸೃಷ್ಟಿಗಾಗಿ ನುರಿತು ತರಬೇತುದಾರರಿಂದ ತರಬೇತಿ ನೀಡಲು ಯುವಜನ ಸ್ಪಂದನ ಕೌಶಲ್ಯ ತರಬೇತಿ ಕೇಂದ್ರ ಎಂಬ ಉತ್ತಮ ವೇದಿಕೆಯನ್ನು ಸಜ್ಜುಗೊಳಿಸಿದ್ದಾರೆ. 

ನಿರುದ್ಯೋಗ ಸಮಸ್ಯೆಯಿಂದ ನರಳುತ್ತಿರುವ ಯುವ ಜನತೆಯ ಕಷ್ಟಕ್ಕೆ ಬೆನ್ನೆಲುಬಾಗಿನಿಲ್ಲುವ ಸದುದ್ದೇಶದಿಂದ  ಯುವಜನ ಸ್ಪಂದನ ಕೌಶಲ್ಯ ತರಬೇತಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ.  ಯುವಜನತೆ ಆರ್ಥಿಕ ಸಬಲೀಕರಣಕ್ಕೆ ಉದ್ದೇಶದೊಂದಿಗೆ ಯುವಜನತೆಯ ಅಭಿರುಚಿಗೆ ತಕ್ಕಂತೆ ಸಮಾಲೋಚಿಸಿ ಅಗತ್ಯ ತರಬೇತಿಯೊಂದಿಗೆ ಉದ್ಯೋಗಾವಕಾಶವನ್ನು ಕಲ್ಪಿಸಿಕೊಳ್ಳುವ ವೇದಿಕೆ.

Read More